ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಸಿಂಗ್‌ಪೋರಾ ಪ್ರದೇಶದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ಆರಂಭಿಸಿದ್ದು, ಸ್ಥಳದಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿದೆ.
ಪಾಕಿಸ್ತಾನ ಬೆಂಬಲಿತ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಮೂವರು ಭಯೋತ್ಪಾದಕರು ಅಡಗಿಕುಳಿತಿದ್ದು, ಉಗ್ರರನ್ನು ಭದ್ರತಾ ಪಡೆಗಳು ಸುತ್ತುವರೆದು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಈ ನಡುವೆ ಯೋಧರ ಮೇಲೆ ಉಗ್ರರು ಗ್ರೆನೇಡ್‌ಗಳನ್ನು ಎಸೆದಿದ್ದು, ಪರಿಣಾಮ 8 ಮಂದಿ ಸೈನಿಕರು ಗಾಯಗೊಂಡಿದ್ದಾರೆಂದು ವರದಿಗಳು ತಿಳಿಸಿವೆ. ವಿಡಿಯೋ ಇಲ್ಲಿದೆ ನೋಡಿ.