ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಅವರು ಗುರುವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ.
ಇತ್ತಿಚೀಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳುವ ಮೂಲಕ ಕಾಂಗ್ರೆಸ್ ಕೆಂಗಣ್ಣಿಗೆ ಗುರಿಯಾಗಿದ್ದ ತಿರುವನಂತಪುರಂ ಸಂಸದ ಇಂದು ಬೆಳಗ್ಗೆ ಸಂಸತ್ ಭವನದಲ್ಲಿ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದ್ದಾರೆ.
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ತರೂರ್, ನಾನು ನಮ್ಮ ಇಬ್ಬರು ಪಕ್ಷದ ನಾಯಕರಾದ ಎಲ್ಒಪಿ ಮತ್ತು ಕಾಂಗ್ರೆಸ್ ಅಧ್ಯಕ್ಷರೊಂದಿಗೆ ಚರ್ಚೆ ನಡೆಸಿದ್ದೇನೆ.
ನಾವು ತುಂಬಾ ಒಳ್ಳೆಯ, ರಚನಾತ್ಮಕ, ಸಕಾರಾತ್ಮಕ ಚರ್ಚೆ ನಡೆಸಿದ್ದೇವೆ. ಎಲ್ಲವೂ ಚೆನ್ನಾಗಿದೆ, ಮತ್ತು ನಾವು ಒಮ್ಮತದೊಂದಿದೆ ಒಟ್ಟಿಗೆ ಸಾಗುತ್ತಿದ್ದೇವೆ ಎಂದರು. ವಿಡಿಯೋ ಇಲ್ಲಿದೆ ನೋಡಿ.