ಬಿಡದಿ ಟೌನ್ಶಿಪ್ ನ್ನು ವಿರೋಧಿಸುತ್ತಿರುವ ಸ್ಥಳೀಯರ ಆಕ್ರೋಶ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜಮೀನು ಸ್ವಾಧೀನಪಡಿಸಿಕೊಳ್ಳುವ ಸರ್ಕಾರದ ನಿರ್ಧಾರಕ್ಕೆ ರೈತರು ಕೆರಳಿದ್ದಾರೆ.
ವಿರೋಧದ ನಡುವೆಯೂ ಬಿಡದಿ ತಾಲೂಕಿನ ಮಂಡಲಹಳ್ಳಿ ಗ್ರಾಮದಲ್ಲಿ ಜೆಎಂಸಿ ಸರ್ವೆಗೆ ಮುಂದಾದ ಜಿಬಿಡಿಎ ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ ಹೊರಹಾಕಿದ್ದಾರೆ.
ಜೆಎಂಸಿ ಸರ್ವೇ ನಡೆಸದಂತೆ ಮಂಡಲಹಳ್ಳಿ ಗ್ರಾಮದ ರೈತರು ಎಚ್ಚರಿಕೆ ನೀಡಿದ್ದರು.
ಎಚ್ಚರಿಕೆ ಹೊರತಾಗಿಯೂ ಸರ್ವೇ ನಡೆಸಲು ಮುಂದಾದ ಅಧಿಕಾರಿಗಳಿಗೆ ರೈತ ಮಹಿಳೆಯರು ಪೊರಕೆ ಏಟು ಕೊಟ್ಟಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.