ಅತ್ಯಂತ ವ್ಯವಸ್ಥಿತವಾಗಿ ವಿಧಾನ ಪರಿಷತ್ ಚುನಾವಣೆಯಲ್ಲಿ ಡಿ.ಕೆ ಶಿವಕುಮಾರ್ ಅವರಿಗೆ ಸಹಾಯ ಮಾಡುವ ಕೆಲಸವನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾಡಿದ್ದಾನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹರಿಹಾಯ್ದಿದ್ದಾರೆ.
ವಿಜಯಪುರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ವೈಯಕ್ತಿಕ ವಿಚಾರ ಹಾಗೂ ನನ್ನ ಕುಟುಂಬದ ಬಗ್ಗೆ ಕೆಟ್ಟ ರೀತಿಯಲ್ಲಿ ಮಾತನಾಡಿದರೆ, ನಿಮ್ಮ ಕುಟುಂಬದ ಇತಿಹಾಸ ನನ್ನ ಬಳಿ ಇದೆ.
ಅಗತ್ಯ ಬಂದರೆ ಅದನ್ನೂ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.