ಕಲಬುರಗಿ ಸೆಂಟ್ರಲ್ ಜೈಲಿನಿಂದ ಕಾಂಪೌಂಡ್ ಗೋಡೆ ಹಾರಿ ಮೂವರು ಕೈದಿಗಳು ಪರಾರಿಯಾಗಿದ್ದಾರೆ.
ಈ ಕುರಿತು ಕಲಬುರಗಿ ನಗರ ಪೊಲೀಸ್ ಆಯುಕ್ತ ಶರಣಪ್ಪ ಎಸ್.ಡಿ ಅವರು ಮಂಗಳವಾರ ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಸಜಾ ಕೈದಿಗಳು ಪರಾರಿಯಾಗಿರುವ ಬಗ್ಗೆ ಫಾರ್ಥಾಬಾದ್ ಪೊಲೀಸ್ ಠಾಣೆಗೆ ಮಾಹಿತಿ ಲಭಿಸಿದೆ.
ಈ ಸಂಬಂಧ ಫರ್ತಾಬಾದ್‌ನಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದೇವೆ. ಕೈದಿಗಳ ಪತ್ತೆಗಾಗಿ ಡಿಸಿಪಿ ಅವರ ಮಾರ್ಗದರ್ಶನದಲ್ಲಿ 3 ವಿಶೇಷ ತಂಡಗಳನ್ನು ರಚಿಸಿದ್ದೇವೆ.
ತಪ್ಪಿಸಿಕೊಂಡು ಪರಾರಿಯಾಗಿರುವ ಕೈದಿಗಳನ್ನು ಶೀಘ್ರದಲ್ಲೇ ನಾವು ಬಂಧಿಸುತ್ತೇವೆ ಎಂದು ತಿಳಿಸಿದರು. ವಿಡಿಯೋ ಇಲ್ಲಿದೆ ನೋಡಿ.