ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಕೈದಿಗಳು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬುಧವಾರ ಮಹತ್ವದ ಬೆಳವಣಿಗೆ ನಡೆದಿದೆ.
ಸಂತೋಷ್ ಎಂದು ಗುರುತಿಸಲಾದ ಆರೋಪಿ ಪೊಲೀಸ್ ಸಿಬ್ಬಂದಿಯನ್ನು ಪತ್ತೆಹಚ್ಚಿ ಬಂಧಿಸಲು ಪ್ರಯತ್ನಿಸಿದಾಗ ಅವರ ಮೇಲೆ ದಾಳಿ ಮಾಡಿದ್ದಾನೆ
ಈ ವೇಳೆ ಆತ್ಮರಕ್ಷಣೆಗಾಗಿ ಪೊಲೀಸರು ಕೈದಿಯ ಕಾಲಿಗೆ ಗುಂಡು ಹಾರಿಸಿ ಆತನನ್ನು ಬಂಧಿಸಿದ್ದಾರೆ. ಈ ವೇಳೆ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ.
ಕಲಬುರಗಿ ನಗರ ಪೊಲೀಸ್ ಆಯುಕ್ತ ಶರಣಪ್ಪ ಎಸ್.ಡಿ ಬುಧವಾರ ಮಾಧ್ಯಮಗಳಿಗೆ ಮಾಹಿತಿ ನೀಡಿದರು. ವಿಡಿಯೋ ಇಲ್ಲಿದೆ ನೋಡಿ.