ಸಂಸತ್ ಚಲೋ ನಡೆಸುತ್ತಿದ್ದ ಸಿಜೆಪಿ ಪ್ರತಿಭಟನಾಕಾರರ ಮೇಲಿನ ಬಲ ಪ್ರಯೋಗವನ್ನು ಖಂಡಿಸಿ ಕಾಂಗ್ರೆಸ್ ಮಂಗಳವಾರ ಪ್ರಧಾನಿ ನಿವಾಸದ ಹೊರಗಡೆ ತೀವ್ರ ಪ್ರತಿಭಟನೆ ನಡೆಸಿತು.
ಪ್ರತಿಭಟನೆ ಹಿಂಪಡೆಯಲು ನಿರಾಕರಿಸಿದ ಕಾಂಗ್ರೆಸ್ ನಾಯಕರಾದ ರಾಹುಲ್ , ಪ್ರಿಯಾಂಕಾ ಗಾಂಧಿ ಹಾಗೂ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ಪೊಲೀಸರು ವಶಕ್ಕೆ ಪಡೆದರು.
ಈ ಕುರಿತು ಬುಧವಾರ ಪ್ರತಿಕ್ರಿಯೆ ನೀಡಿದ ಪ್ರಿಯಾಂಕಾ ಗಾಂಧಿ, ನಿನ್ನೆ ವಿರೋಧ ಪಕ್ಷಗಳನ್ನು ಹತ್ತಿಕ್ಕಲು ತೆಗೆದುಕೊಂಡ ಕ್ರಮ ಅಪ್ರಸ್ತುತ, ಆದರೆ ವಿದ್ಯಾರ್ಥಿಗಳ ಮೇಲೆ ನಡೆಸಿದ ದೌರ್ಜನ್ಯ ನಿಜವಾದ ಸಮಸ್ಯೆ.
ಅಭಿವ್ಯಕ್ತಿ ಸ್ವಾತಂತ್ರ್ಯವು ಪ್ರಜಾಪ್ರಭುತ್ವದ ದೊಡ್ಡ ಶಕ್ತಿ; ಅದನ್ನು ದಮನಿಸಲು ಸಂಸತ್ತಿನಲ್ಲಿ ಮತ್ತು ಬೀದಿಗಳಲ್ಲಿ ಪ್ರಜಾಪ್ರಭುತ್ವ ವಿರೋಧಿ ಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿದರು. ವಿಡಿಯೋ ಇಲ್ಲಿದೆ ನೋಡಿ.