ಸಿಜೆಪಿಗೆ ನೂರಾರು ಕೋಟಿ ಯಾರು ಕೊಡ್ತಿದ್ದಾರೆ? ಊಟ ತಿಂಡಿ ಎಲ್ಲಿಂದ ಬರ್ತಿದೆ ಎಂದು ರಾಜ್ಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಪ್ರಶ್ನಿಸಿದ್ದಾರೆ.
ಪ್ರಧಾನಿ ಮೋದಿ ನಿವಾಸದ ಎದುರು ರಾಹುಲ್ ಗಾಂಧಿ ಪ್ರತಿಭಟನೆ ನಡೆಸಿದ್ದ ಹಿನ್ನೆಲೆಯಲ್ಲಿ ಬುಧವಾರ ಬಿಜೆಪಿ ನಾಯಕರು ಕೆಪಿಸಿಸಿ ಕಚೇರಿಗೆ ಮುತ್ತಿಗೆ ಹಾಕಿದ್ದರು.
ಈ ವೇಳೆ ಬಿಜೆಪಿ ಶಾಸಕ ಬಿಪಿ ಹರೀಶ್ ಮೇಲೆ ಮೊಟ್ಟೆ ದಾಳಿ ನಡೆಸಿದ್ದನ್ನು ಖಂಡಿಸಿ ಗುರುವಾರ ವಿಧಾನಸೌಧದ ಗಾಂಧಿ ಪ್ರತಿಮೆಯ ಮುಂದೆ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ರಾಹುಲ್ ಗಾಂಧಿ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ವಿಡಿಯೋ ಇಲ್ಲಿದೆ ನೋಡಿ.