ಮೇಕೆದಾಟು ಜಲಾಶಯ ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕದ ಪರವಾಗಿ ಕೇಂದ್ರ ಸರ್ಕಾರ ಮಹತ್ವದ ಸ್ಪಷ್ಟನೆ ನೀಡಿದೆ.
ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕಕ್ಕೆ ತನ್ನ ಭೂಭಾಗದಲ್ಲಿ ಜಲಾಶಯ ನಿರ್ಮಿಸುವ ಕಾನೂನುಬದ್ಧ ಹಕ್ಕು ಇದೆ.
ಇದಕ್ಕಾಗಿ ತಮಿಳುನಾಡು, ಕೇರಳ ಅಥವಾ ಪುದುಚೇರಿಯ ಸಮ್ಮತಿ ಪಡೆಯುವ ಅಗತ್ಯ ಇಲ್ಲ ಎಂದು ಜಲಶಕ್ತಿ ಸಚಿವಾಲಯ ರಾಜ್ಯಸಭೆಯಲ್ಲಿ ತಿಳಿಸಿದೆ.
ಈ ಹೇಳಿಕೆಯಿಂದ ಬಹುಕಾಲದ ಮೇಕೆದಾಟು ವಿವಾದಕ್ಕೆ ಹೊಸ ತಿರುವು ಸಿಕ್ಕಿದ್ದು, ಕರ್ನಾಟಕದ ನಿಲುವಿಗೆ ಮತ್ತಷ್ಟು ಬಲ ದೊರೆತಿದೆ.
ರಾಜ್ಯಸಭೆಯಲ್ಲಿ ತಮಿಳುನಾಡಿನ ಸಂಸದ ಡಾ. ಅನ್ಬುಮಣಿ ರಾಮದಾಸ್ ಕೇಳಿದ ಪ್ರಶ್ನೆಗೆ ಕೇಂದ್ರ ಜಲಶಕ್ತಿ ಖಾತೆ ರಾಜ್ಯ ಸಚಿವ ರಾಜ್ ಭೂಷಣ್ ಚೌಧರಿ ಉತ್ತರಿಸಿದರು.
ಮೇಕೆದಾಟು ಯೋಜನೆಗೆ ಕೇಂದ್ರದ ಬೆಂಬಲ ಕುರಿತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯೆ ನೀಡಿದರು. ವಿಡಿಯೋ ಇಲ್ಲಿದೆ ನೋಡಿ.