ಮಹಾರಾಷ್ಟ್ರದ ಭಿವಂಡಿಯಲ್ಲಿ ನಾಲ್ಕು ಅಂತಸ್ತಿನ ವಸತಿ ಕಟ್ಟಡ ಕುಸಿದು ಕನಿಷ್ಠ 9 ಮಂದಿ ಸಾವನ್ನಪ್ಪಿದ್ದಾರೆ.
ಇನ್ನೂ ಹಲವರು ಅವಶೇಷಗಳ ಅಡಿಯಲ್ಲಿ ಇನ್ನೂ ಐವರು ಸಿಲುಕಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಗುರುವಾರ ರಾತ್ರಿ 11.30 ರ ಸುಮಾರಿಗೆ ಬಾಲಾಜಿ ನಗರದ ಕೊಹಿನೂರ್ ಕಟ್ಟಡದ ಒಂದು ಭಾಗ ಕುಸಿದು ಬಿದ್ದಿದೆ.
ಈ ಕಟ್ಟಡವು ಒಟ್ಟು 48 ಕೊಠಡಿಗಳನ್ನು ಹೊಂದಿದ್ದು, ಪ್ರತಿ ಮಹಡಿಯಲ್ಲಿ 12 ಕೊಠಡಿಗಳಿವೆ.
ದುರಸ್ತಿ ಕಾರ್ಯ ನಡೆಯುತ್ತಿರುವಾಗ ಈ ಕುಸಿತ ಸಂಭವಿಸಿದೆ. ವಿಡಿಯೋ ಇಲ್ಲಿದೆ ನೋಡಿ.