ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (ವಿಶಾಖಪಟ್ಟಣಂ ಸ್ಟೀಲ್ ಪ್ಲಾಂಟ್) ನಲ್ಲಿ ಸೋಮವಾರ ದುರಂತ ಸಂಭವಿಸಿದೆ.
ದುರಂದಲ್ಲಿ ಕನಿಷ್ಠ 8 ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಕಾರ್ಮಿಕರು ತೀವ್ರವಾಗಿ ಗಾಯಗೊಂಡಿದ್ದಾರೆ.
ಕ್ರೇನ್ ಮೂಲಕ ಸಾಗಿಸುತ್ತಿದ್ದ ಬಕೆಟ್‌ನಿಂದ ಕುದಿಯುತ್ತಿದ್ದ ಬಿಸಿಯಾದ ಕರಗಿದ ಉಕ್ಕು ಇದ್ದಕ್ಕಿದ್ದಂತೆ ಕಾರ್ಮಿಕರ ಮೇಲೆ ಬಿದ್ದು ಈ ದುರಂತ ಸಂಭವಿಸಿದೆ.
ಅಪಘಾತದ ಸಮಯದಲ್ಲಿ ಕರಗಿದ ಉಕ್ಕು ಸುಮಾರು 1,600°C ಗರಿಷ್ಠ ತಾಪಮಾನದಲ್ಲಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.