ರಷ್ಯಾದಿಂದ ಭಾರತ ಕಚ್ಚಾ ತೈಲ ಖರೀದಿಸುತ್ತಿರುವುದನ್ನು ಟೀಕಿಸಿರುವ ಯುರೋಪಿನ ದೇಶಗಳಿಗೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.
ಭಾರತ ತನ್ನ ಇಂಧನ ಅಗತ್ಯಗಳನ್ನು ಬೆಲೆ ಮತ್ತು ಲಭ್ಯತೆಯ ಆಧಾರದ ಮೇಲೆ ನಿರ್ಧರಿಸುತ್ತದೆಯೇ ಹೊರತು ಯಾವುದೇ ರಾಜಕೀಯ ಒತ್ತಡದ ಆಧಾರದ ಮೇಲೆ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಫಿನ್‌ಲ್ಯಾಂಡ್‌ನಲ್ಲಿ ನಡೆದ 'ಕುಲ್ತಾರಂತ ಟಾಕ್ಸ್' ಸಮ್ಮೇಳನದಲ್ಲಿ ಮಾತನಾಡಿದ ಜೈಶಂಕರ್, ಭಾರತ ರಷ್ಯಾ ಪರ ಮೃದು ನಿಲುವು ತಾಳಿದೆ ಹಾಗೂ ಹೆಚ್ಚಿನ ಪ್ರಮಾಣದಲ್ಲಿ ರಷ್ಯನ್ ತೈಲ ಖರೀದಿಸಿದೆ ಎಂಬ ಟೀಕೆಗೆ ಉತ್ತರಿಸಿದರು. ವಿಡಿಯೋ ಇಲ್ಲಿದೆ ನೋಡಿ.