ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಬಹುಭಾಷಾ ನಟ ಪ್ರಕಾಶ್ ರಾಜ್ ಹೆಸರು ತಳುಕು ಹಾಕಿಕೊಂಡಿದೆ. ಈ ಬಗ್ಗೆ ಮಾಸ್ಕ್ ಮ್ಯಾನ್ ಸಿ.ಎನ್. ಚಿನ್ನಯ್ಯ ಹೈಕೋರ್ಟ್ ಗೆ ಸಲ್ಲಿಸಿರುವ ರಿಟ್ ಅರ್ಜಿಯಲ್ಲಿ ಉಲ್ಲೇಖವಾಗಿದೆ.
ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ಜೈಲಿಗೆ ಕಳುಹಿಸಬೇಕೆಂದು ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್ ಮತ್ತಿತರರು ಷಡ್ಯಂತ್ರ ಮಾಡಿದ್ದಾರೆ ಎಂದು ಮಾಸ್ಕ್ ಮ್ಯಾನ್ ಸಿ.ಎನ್. ಚಿನ್ನಯ್ಯ ಹೇಳಿದ್ದಾರೆ.
ಪ್ರಕಾಶ್ ರಾಜ್ ಎಂಬುವರು ನನ್ನ ಜೊತೆ ದೂರವಾಣಿಯಲ್ಲಿ ಮಾತನಾಡಿದ್ದರು. ಒಂದು ದಿನ ಅಪ್ಪಿಕೊಳ್ಳುವುದಾಗಿ ಹೇಳಿದ್ದರು ಎಂದು ಅರ್ಜಿಯಲ್ಲಿ ಚಿನ್ನಯ್ಯ ಉಲ್ಲೇಖಿಸಿದ್ದಾರೆ.
ಈ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದ್ದಾರೆ. ಅಲ್ಲದೆ, ಮೈಕ್ರೋ ಫೈನಾನ್ಸ್ ಕಾಯ್ದೆ (Micro Finance Act) ಧರ್ಮಸ್ಥಳ ಸಂಘ ಪಾಲನೆ ಮಾಡ್ತಿಲ್ಲ ಎಂಬ ಆರೋಪಕ್ಕೆ ಸಹ ಗೃಹ ಸಚಿವರು ಪ್ರತಿಕ್ರಿಯಿಸಿದರು. ವಿಡಿಯೋ ಇಲ್ಲಿದೆ ನೋಡಿ.