ವಿಜಯಪುರ ಜಿಲ್ಲೆಯಲ್ಲಿ ಭೀಮಾತೀರ ಕೊಲೆ ಪ್ರಕರಣದ ಆರೋಪಿಯು ಸೋಮವಾರ ಪೊಲೀಸರ ಮೇಲೆ ಕಲ್ಲು ತೂರಿದ್ದಲ್ಲದೆ ಅಧಿಕಾರಿಗಳಿಗೆ ಚಾಕುವಿನಿಂದ ಬೆದರಿಕೆ ಹಾಕಿ ಪರಾರಿಯಾಗಲು ಯತ್ನಿಸಿದ್ದಾನೆ.
ನಂತರ ಪೊಲೀಸರು ಸ್ವಯಂ ರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಆತನ್ನು ಬಂಧಿಸಿದ್ದಾರೆ. ಆತನ ಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೇ 29 ರಂದು ಭೂ ವಿವಾದಕ್ಕೆ ಸಂಬಂಧಿಸಿದಂತೆ ವಿಜಯಪುರ ಜಿಲ್ಲೆಯ ಗೋವಿಂದಪುರ ಗ್ರಾಮದಲ್ಲಿ ಆರು ಜನರನ್ನು ಕೊಲೆ ಮಾಡಲಾಗಿತ್ತು.
ಈ ಪ್ರಕರಣದ ಆರೋಪಿಗಳಲ್ಲಿ ಮಹೇಶ್ ತಲ್ವಾರ್ ಒಬ್ಬನು ಎಂದು ಗುರುತಿಸಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.