ತುಮಕೂರು ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲೇ ಭಗ್ನ ಪ್ರೇಮಿಯೋರ್ವ ಯುವತಿಗೆ ಚಾಕು ಇರಿದಿದ್ದು ಮಾತ್ರವಲ್ಲದೇ ಪೆಟ್ರೋಲ್ ಬಾಂಬ್ ಸಿಡಿಸಿದ್ದಾನೆ.
ತುಮಕೂರು—ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯ ಶಿರಾ ತಾಲೂಕಿನ ಜೋಗಿಹಳ್ಳಿ ಬಳಿ ಶನಿವಾರ ಈ ಘಟನೆ ಸಂಭವಿಸಿದೆ.
ಚಲಿಸುತ್ತಿದ್ದ ಖಾಸಗಿ ಕಾರಿನೊಳಗೆ ಯುವಕನೊಬ್ಬ ಯುವತಿಗೆ ಚಾಕುವಿನಿಂದ ಇರಿದು, ಬಳಿಕ ಕಾರಿನ ಎಲ್ಲಾ ಡೋರ್‌ಗಳನ್ನು ಲಾಕ್ ಮಾಡಿಕೊಂಡು ಪೆಟ್ರೋಲ್ ಬಾಂಬ್ ಸಿಡಿಸಿಕೊಂಡು ಸಜೀವ ದಹನವಾಗಿದ್ದಾನೆ.
ಮೃತನನ್ನು ಬೆಂಗಳೂರಿನ ನಾಗೇಂದ್ರ (30) ಎಂದು ಗುರುತಿಸಲಾಗಿದೆ.
ಇನ್ನು ತೀವ್ರ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿರುವ ಯುವತಿ ರಮ್ಯಾ ಉಲ್ಲಾಸ್ (23) ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ವಿಡಿಯೋ ಇಲ್ಲಿದೆ ನೋಡಿ.