ಅಕ್ರಮ ಆಸ್ತಿ ಹೊಂದಿರುವ ಆರೋಪದ ಮೇಲೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಹಲವಾರು ಸರ್ಕಾರಿ ಅಧಿಕಾರಿಗಳ ಮೇಲೆ ಲೋಕಾಯುಕ್ತ ಗುರುವಾರ ಏಕಕಾಲದಲ್ಲಿ ದಾಳಿ ನಡೆಸಿದೆ.
ಬೆಂಗಳೂರು, ಮಂಡ್ಯ, ಧಾರವಾಡ, ಹಾಸನ, ಮೈಸೂರು, ವಿಜಯಪುರ ಮತ್ತು ಯಾದಗಿರಿ ಸೇರಿದಂತೆ ಇತರ ಜಿಲ್ಲೆಗಳ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಗಳಿಗೆ ಸಂಬಂಧಿಸಿದ ಅನೇಕ ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ.
ಲೋಕಾಯುಕ್ತ ದಾಳಿಗೊಳಗಾದವರಲ್ಲಿ ಹಾಸನ ನಗರಸಭೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಎಂ.ಸಿ. ಸತ್ಯನಾರಾಯಣ ಕೂಡ ಸೇರಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.