ನನ್ನ ರಾಜಕೀಯ ಬದುಕಿನಲ್ಲಿ ಅನೇಕ ಸೋಲುಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದರು.
ಮೈಸೂರಿನ ವರಕೋಡು ಗಡಿ ಗುರುಮಠ ವರುಣದಲ್ಲಿ ಆಯೋಜಿಸಲಾಗಿದ್ದ ಬೀರೇಶ್ವರಸ್ವಾಮಿ ದೇವಸ್ಥಾನದ ಪುನರ್ ಪ್ರತಿಷ್ಠಾಪನೆ ಮಹೋತ್ಸವದಲ್ಲಿ ಸಿಎಂ ಪಾಲ್ಗೊಂಡಿದ್ದರು.
ಈ ವೇಳೆ ಮಾತನಾಡಿದ ಮುಖ್ಯಮಂತ್ರಿಗಳು, ನನ್ನ ಕೊನೆ ಉಸಿರುವವರೆಗೆ ಜನ ಸೇವೆಯಲ್ಲಿ ಸದಾ ತೊಡಗಿರುತ್ತೇನೆ.
ಯತೀಂದ್ರ ಸಿದ್ದರಾಮಯ್ಯ ಈ ಕ್ಷೇತ್ರದ ಅಭಿವೃದ್ಧಿಗೆ ಸೇವೆ ಸಲ್ಲಿಸುತ್ತಿದ್ದು, ಜನರು ಅವರನ್ನು ಬೆಂಬಲಿಸಬೇಕು ಎಂದರು. ವಿಡಿಯೋ ಇಲ್ಲಿದೆ ನೋಡಿ.