ಹುಬ್ಬಳ್ಳಿ, ಬೆಂಗಳೂರು ಮತ್ತು ಮೈಸೂರು ಕೇಂದ್ರಗಳಲ್ಲಿ ಆರಂಭವಾಗಿದ್ದ ರೈಲ್ವೆ ಪದನ್ನೋತಿ ಪರೀಕ್ಷೆಗಳನ್ನು ಕರ್ನಾಟಕ ರಕ್ಷಣಾ ವೇದಿಕೆಯ ತೀವ್ರ ಹೋರಾಟದ ಹಿನ್ನೆಲೆಯಲ್ಲಿ ಮಂಗಳವಾರ ರದ್ದುಗೊಳಿಸಲಾಗಿದೆ.
ಇಂದು ಬೆಳಿಗ್ಗೆ 8 ಗಂಟೆಯಿಂದಲೇ ಹುಬ್ಬಳ್ಳಿಯ ನೈರುತ್ಯ ರೈಲ್ವೆ ಪ್ರಧಾನ ಕಚೇರಿ ಮುಂದೆ ನೆರೆದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪರೀಕ್ಷೆಗಳನ್ನು ರದ್ದುಪಡಿಸುವಂತೆ ಆಗ್ರಹಿಸಿದರು.
ತಂಡ ತಂಡವಾಗಿ ಪರೀಕ್ಷಾ ಸ್ಥಳಕ್ಕೆ ಆಗಮಿಸಿದ ಕಾರ್ಯಕರ್ತರು ಪರೀಕ್ಷಾ ಕೇಂದ್ರಗಳಿಗೆ ನುಗ್ಗಲು ಮುಂದಾದರು.
ಈ ಸಂದರ್ಭದಲ್ಲಿ ಪ್ರತಿಭಟನಾನಿರತ ಕರವೇ ಮುಖಂಡರೊಂದಿಗೆ ಮಾತುಕತೆ ನಡೆಸಿದ ರೈಲ್ವೆ ಅಧಿಕಾರಿಗಳು ಪರೀಕ್ಷೆಗಳನ್ನು ರದ್ದುಪಡಿಸಿರುವುದಾಗಿ ಘೋಷಿಸಿದರು.
ಪರೀಕ್ಷೆಗೆ ಆಗಮಿಸಿದ್ದ ಪರೀಕ್ಷಾರ್ಥಿಗಳನ್ನು ಹೊರಗೆ ಕಳುಹಿಸಲಾಯಿತು. ವಿಡಿಯೋ ಇಲ್ಲಿದೆ ನೋಡಿ.