ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ಭಾನುವಾರ ರಾತ್ರಿ ಏರ್ ಕೆನಡಾ ಎಕ್ಸ್‌ಪ್ರೆಸ್ ಪ್ರಾದೇಶಿಕ ಜೆಟ್ ಒಂದು ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪ್ಯಾಸೆಂಜರ್ ವಿಮಾನದ ಮುಂಭಾಗ ಹಾನಿಗೊಂಡಿದೆ.
ಏರ್ ಕೆನಡಾ ಪರವಾಗಿ ಕಾರ್ಯನಿರ್ವಹಿಸುತ್ತಿರುವ ಜಾಝ್ ಏವಿಯೇಷನ್ ವಿಮಾನದಲ್ಲಿ 72 ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿ ಇದ್ದರು ಎಂದು ವಿಮಾನಯಾನ ಸಂಸ್ಥೆಯ ಹೇಳಿಕೆ ತಿಳಿಸಿದೆ. ವಿಡಿಯೋ ಇಲ್ಲಿದೆ ನೋಡಿ.