ನಮ್ಮ ಜತೆ ಪ್ರೀತಿ, ಮೋದಿ ಜತೆ ಮದುವೆ ಎಂದು ತಮ್ಮ ಬಗ್ಗೆ ಟೀಕೆ ಮಾಡಿದ್ದ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ರಾಜ್ಯಸಭೆಯಲ್ಲಿಯೇ ಸೋಮವಾರ ತಿರುಗೇಟು ಕೊಟ್ಟಿದ್ದಾರೆ.
ನಾನು ಸದನದಲ್ಲಿ ಇಲ್ಲದಿದ್ದ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಈ ವಿಷಯ ಪ್ರಸ್ತಾಪಿಸಿ ಮಾತನಾಡಿದ್ದಾರೆ.
ಅವರು ನಾನೇನೂ ಅವರಿಗೆ, ಅವರ ಪಕ್ಷಕ್ಕೆ ದ್ರೋಹ ಬಗೆದಿದ್ದೇನೆ ಎಂದು ಅರ್ಥ ಬರುವ ರೀತಿಯಲ್ಲಿ ಮಾತನಾಡಿದ್ದಾರೆ.
ಆದರೆ, ನಿಜವಾಗಿಯೂ ಕಾಂಗ್ರೆಸ್ ಪಕ್ಷದಿಂದ ದ್ರೋಹ ಆಗಿರುವುದು ನಮಗೆ, ನಮ್ಮ ಪಕ್ಷಕ್ಕೆ ಎಂದು ಎಂದು ಹರಿಹಾಯ್ದರು. ಪೂರ್ಣ ಭಾಷಣ ಇಲ್ಲಿದೆ ನೋಡಿ.