ವಿಡಿಯೋ

Watch | ಜೀವರಾಜ್ ಗೆ ಎರಡು ವರ್ಷ ಅಧಿಕಾರ ಬಿಟ್ಟುಕೊಡಲಿ: ವಿಜಯೇಂದ್ರ; 'ಇದು ದೊಡ್ಡ ಸಂಚು': ಡಿ.ಕೆ ಶಿವಕುಮಾರ್

ಮಾಜಿ ಶಾಸಕ ಡಿ.ಎನ್ ಜೀವರಾಜ್ ಅವರು ಯಾವ ರೀತಿ ಅಧಿಕಾರಿಗಳನ್ನು ದುರುಪಯೋಗಪಡಿಸಿಕೊಂಡು ಪಿತೂರಿ ನಡೆಸಿದ್ದಾರೆ ಎಂಬುದಕ್ಕೆ ಶೃಂಗೇರಿ ಕ್ಷೇತ್ರದ ಅಂಚೆ ಮತ ಎಣಿಕೆ ದೊಡ್ಡ ಸಾಕ್ಷಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕಿಡಿಕಾರಿದ್ದಾರೆ.

ಭಾನುವಾರ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಿನ್ನೆಯಿಂದ ನಡೆದ ಬೆಳವಣಿಗೆ ಬಗ್ಗೆ ನನಗೆ ವರದಿ ಬಂದಿದೆ.

ಬ್ಯಾಲೆಟ್ ಬಾಕ್ಸ್ ನ್ನು ತೆರೆಸಿ ಏನೆಲ್ಲಾ ಅಕ್ರಮ ಮಾಡಬಹುದು, ಕೋರ್ಟ್ ಗೆ ಹೋಗಿ ಬರೀ ಅಂಚೆ ಮತಎಣಿಕೆಯನ್ನು ಮಾತ್ರ ಮತ್ತೆ ಎಣಿಕೆ ಮಾಡಿಸಿರುವುದು, ಅವರ ಏಜೆಂಟ್ ಸಹಿ ಮಾಡಿದ್ದನ್ನು ತಿರುಚಿದ್ದು ಇಡೀ ದೇಶಕ್ಕೆ ವ್ಯವಸ್ಥಿತ ಅಪರಾಧವಿದು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಪ್ರತಿಕ್ರಿಯಿಸಿ, 2023ರಲ್ಲಿ ಪರಾಭವಗೊಂಡಾಗಲೇ ಡಿ.ಎನ್ ಜೀವರಾಜ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.

ಸುಪ್ರೀಂ ಕೋರ್ಟ್ ವರೆಗೆ ಕೂಡ ಹೋಯಿತು. ಈಗ ಹೈಕೋರ್ಟ್ ಆದೇಶ ಪ್ರಕಾರ ಅಂಚೆಮತ ಮರು ಎಣಿಕೆ ಆಗಿದೆ.

ಮಧ್ಯರಾತ್ರಿಯೇ ನಮಗೆ ಮಾಹಿತಿ ಸಿಕ್ಕಿತು, ಜೀವರಾಜ್ ಅವರು 56 ಮತಗಳಿಂಗ ಗೆದ್ದಿದ್ದಾರೆ ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹಾರ್ಮುಜ್ ಜಲಸಂಧಿ ಒಪ್ಪಂದ ಸನ್ನಿಹಿತ, ಆದರೆ ಯಾವುದಾದರೊಂದು ದೇಶ ತನ್ನ ನಿಲುವಿನಲ್ಲಿ ಸಡಿಲಿಕೆ ತೋರಿಸಬೇಕು: ಇರಾನ್-ಯುಎಸ್

Mojtaba Khamenei ಎಲ್ಲಿದ್ದಾರೆ? ರಹಸ್ಯ ತಾಣದಲ್ಲಿ ಪರಮೋಚ್ಛ ನಾಯಕ; ಅವರ ಉಪಸ್ಥಿತಿಯೇ ನಮ್ಮ ಧೈರ್ಯ ಎಂದ Iran ಅಧ್ಯಕ್ಷ

ಅಸಮಾಧಾನಿತ ಶಾಸಕರ ಸಮಸ್ಯೆ ಆಲಿಸಿದ್ದೇವೆ, ನಾವೆಲ್ಲಾ ಒಂದು ಕುಟುಂಬ- ಸುರ್ಜೆವಾಲ; ಸಚಿವ ಸ್ಥಾನ ಹೊರತಾಗಿ ಬೇರೆ ಏನು ಕೊಟ್ಟರೂ ಒಪ್ಪಲ್ಲ- ಎಂ ಕೃಷ್ಣಪ್ಪ

Sheikh Hasina: ವಾಪಸ್ ಬಾಂಗ್ಲಾದೇಶಕ್ಕೆ ಹೋಗಲು ನಿರ್ಧರಿಸಿದ್ದೇನೆ; ನನ್ನನ್ನು ಕೊಲ್ಲಲಿ, ಜೈಲಿಗೆ ಹಾಕಲಿ - ಶೇಖ್ ಹಸೀನಾ

ಸಚಿವ ಸ್ಥಾನ ಕೋಟಿ ಕೋಟಿಗೆ ಹರಾಜು: BJPಯಿಂದ ಆಡಿಯೋ ಬಿಡುಗಡೆ; ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ