ಪಶ್ಚಿಮ ಬಂಗಾಳದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಭವಾನಿಪುರದಲ್ಲಿ ಗೆದ್ದಿದ್ದ ಬಿಜೆಪಿ ಅಭ್ಯರ್ಥಿ ಸುವೇಂಧು ಅಧಿಕಾರಿ ಪಿಎಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಉತ್ತರ 24 ಪರಗಣ ಜಿಲ್ಲೆಯ ಮಧ್ಯಮಗ್ರಾಮ್ ಸಿಟಿಯಲ್ಲಿ ಬುಧವಾರ ರಾತ್ರಿ ಈ ಗುಂಡಿನ ದಾಳಿ ನಡೆದಿದೆ. ಮೃತನನ್ನು ಚಂದ್ರ ನಾಥ್ ದತ್ ಎಂದು ಗುರುತಿಸಲಾಗಿದೆ.
ಚಂದ್ರನಾಥ್ ಎದೆಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.