ವಿಡಿಯೋ

Watch | ಅಧಿಕಾರ ತಪ್ಪಿಸಿದ ಅಪವಾದ ಬರಬಾರದು! ಅದಕ್ಕಾಗಿ ಟಿವಿಕೆ ವಿಜಯ್ ಗೆ ವಿಸಿಕೆ ಬೆಂಬಲ!

ತಮಿಳುನಾಡು ರಾಜಕೀಯ ಗೊಂದಲ ಕೊನೆಗೂ ಅಂತ್ಯವಾಗಿದ್ದು, ವಿಸಿಕೆ ಪಕ್ಷದ ಬೆಂಬಲದೊಂದಿಗೆ ನಟ ವಿಜಯ್ ಸರ್ಕಾರ ರಚನೆಗೆ ಇದ್ದ ತೊಡಕು ನಿವಾರಣೆಯಾಗಿದೆ.

ವಿದುತಲೈ ಚಿರುಥೈಗಳ್ ಕಚ್ಚಿ (ವಿಸಿಕೆ) ಶನಿವಾರ, ಮೇ 9ರಂದು ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ)ಗೆ ಬೆಂಬಲ ಘೋಷಿಸಿದೆ.

ವಿಧಾನಸಭೆಯ ತೀರ್ಪಿನ ಬಳಿಕ ತಮಿಳುನಾಡಿನಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಾಗದಂತೆ ತಡೆಯುವುದು ಮತ್ತು ಜನರ ಜನಾದೇಶವನ್ನು ಕಾಪಾಡುವುದು ಈ ನಿರ್ಧಾರದ ಉದ್ದೇಶ ಎಂದು ಪಕ್ಷ ತಿಳಿಸಿದೆ.

ಅತ್ತ ನಟ ವಿಜಯ್ ಗೆ ತಮ್ಮ ಪಕ್ಷದ ಬೆಂಬಲ ಪತ್ರ ಹಸ್ತಾಂತರಿಸಿದ ಬೆನ್ನಲ್ಲೇ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ವಿಸಿಕೆ ಮುಖ್ಯಸ್ಥ ತೋಲ್ ತಿರುಮಾವಳವನ್ ಮಾತನಾಡಿದರು.

ಎಡಪಂಥೀಯ ಪಕ್ಷಗಳೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಹಾಗೂ ಪಕ್ಷದ ಆತಂರಿಕ ಚರ್ಚೆಗಳ ನಂತರ ಟಿವಿಕೆಗೆ ಬಾಹ್ಯ ಬೆಂಬಲ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

40 ಕೋಟಿ ಯುವಕರು ದೇಶದ ನಿಜವಾದ ಶಕ್ತಿ, ಆದರೆ ನಿರುದ್ಯೋಗ ತಾಂಡವವಾಡುತ್ತಿದೆ: ಉತ್ತರಪ್ರದೇಶದಲ್ಲಿ ರಾಹುಲ್ ಗಾಂಧಿ

Toxic Trailer: ನಾನು ಬರೋ ಸಮಯ ಬಂದಿದೆ ಎಂದ ಯಶ್, ನಾವೆಲ್ಲರೂ ಕಾಯುತ್ತಿದ್ದೇವೆ ಎಂದ ಶಿವಣ್ಣ!

UPI ಪಾವತಿಗಳಿಗೆ ಶುಲ್ಕ ವಿಧಿಸಲ್ಲ: ಯಾರಿಗೆ MDR ವಿಧಿಸಲಾಗುತ್ತದೆ ಎಂಬುದನ್ನು ಬಹಿರಂಗಪಡಿಸಿದ ಕೇಂದ್ರ ಸರ್ಕಾರ!

ಟೆಸ್ಟ್ ಪಂದ್ಯದ ಕೊನೆಯ ಓವರ್​ನಲ್ಲಿ 6, 6, 0, 6, 6 ಸಿಡಿಸಿದ ಗುರ್ನೂರ್ ಬ್ರಾರ್; ಗಂಭೀರ್ ಚಲ್ಲಾಳೆ, Video!

ಅಸಮಾಧಾನಿತ ಕಾಂಗ್ರೆಸ್ ಶಾಸಕರಿಗೆ ಕುಮಾರಸ್ವಾಮಿ ಆಫರ್; ಹೊಸ ದಾಳ ಉರುಳಿಸಿದ 'ದಳಪತಿ'