ಪಶ್ಚಿಮ ಬಂಗಾಳದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮೊದಲ ಸಚಿವ ಸಂಪುಟ ಸಭೆಯಲ್ಲೇ ಗಡಿ ಭದ್ರತೆಗೆ ಸಂಬಂಧಿಸಿದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಭಾರತ–ಬಾಂಗ್ಲಾದೇಶ ಗಡಿ ಪ್ರದೇಶದಲ್ಲಿ ಫೆನ್ಸಿಂಗ್ ಕಾರ್ಯಕ್ಕೆ ಗಡಿ ಭದ್ರತಾ ಪಡೆ (ಬಿಎಸ್ಎಫ್)ಗೆ ಭೂಮಿ ಹಸ್ತಾಂತರಿಸಲು ಅನುಮೋದನೆ ನೀಡಲಾಗಿದೆ.
ಸಭೆಯ ನಂತರ ಮಾತನಾಡಿದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು, ಅಂತರಾಷ್ಟ್ರೀಯ ಗಡಿಯಲ್ಲಿ ಬೇಲಿ ನಿರ್ಮಾಣಕ್ಕಾಗಿ ಸುಮಾರು 105 ಎಕರೆ ಭೂಮಿಯನ್ನು ಕೇಂದ್ರಕ್ಕೆ ವರ್ಗಾಯಿಸಲು ಒಪ್ಪಿಗೆ ನೀಡಲಾಗಿದೆ.
ಈ ಪ್ರಕ್ರಿಯೆಯು ಮೇ 11 ರಿಂದ ಪ್ರಾರಂಭವಾಗಿ 45 ದಿನಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.