ತಮಿಳುನಾಡು ಮುಖ್ಯಮಂತ್ರಿ ವಿಜಯ್ ಜೋಸೆಫ್ ಅವರಿಗೆ ಆಡಳಿತ ಅನುಭವದ ಕೊರತೆಯಿದೆ ಎಂದು ಕಾಂಗ್ರೆಸ್ ಶಾಸಕ ಕೆ.ಎನ್ ರಾಜಣ್ಣ ಹೇಳಿದ್ದಾರೆ.
ಹಣಕಾಸು ನಿರ್ವಹಣೆ ಬಗ್ಗೆ ಯೋಚನೆ ಮಾಡದೆ ಅವರು ಏಕಾಏಕಿ 700ಕ್ಕೂ ಹೆಚ್ಚು ಮದ್ಯದಂಗಡಿಗಳನ್ನು ಮುಚ್ಚುವಂತೆ ಆತುರದ ನಿರ್ಧಾರ ತೆಗೆದುಕೊಂಡು ಆದೇಶಿಸಿದ್ದಾರೆ ಎಂದು ರಾಜಣ್ಣ ಹೇಳಿದರು.
ಮಧುಗಿರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮದ್ಯದಂಗಡಿಗಳಿಂದ ಹೆಚ್ಚಿನ ಆದಾಯ ಬರುತ್ತದೆ, ಆದಾಯದ ಹಾದಿ ಮುಚ್ಚಿಕೊಂಡರೆ ಫ್ರೀ ಬೀಸ್ ನೀಡಲು ಸಾಧ್ಯವೇ.
ವಿಜಯ್ ಮುಂದಿನ ದಿನಗಳಲ್ಲಿ ಎಲ್ಲವನ್ನೂ ನೋಡಿಕೊಂಡು ನಿರ್ಧಾರ ತೆಗೆದುಕೊಳ್ಳಬೇಕು ಎಂದರು. ವಿಡಿಯೋ ಇಲ್ಲಿದೆ ನೋಡಿ.