ಸಾಲದ ಹಣ ವಾಪಸ್ ಕೇಳಲು ಹೋದ ವ್ಯಕ್ತಿ ಮೇಲೆ ಎಂಎಲ್ಸಿ ಅಡಗೂರು ವಿಶ್ವನಾಥ್ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಲದರ್ಶಿನಿಯಲ್ಲಿ ವಿಶ್ವನಾಥ್ ರವರು ಇರುವಾಗ ಹಣ ಕೇಳಲು ಹೋದ ವೇಳೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದರೆಂದು ಕಾಂಗ್ರೆಸ್ ಮುಖಂಡ ಕೋಟೆಹುಂಡಿ ಮಹದೇವು ಆರೋಪಿಸಿ ನ್ಯಾಯಾಲಯದ ಆದೇಶದಂತೆ ಪ್ರಕರಣ ದಾಖಲಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಎಚ್. ವಿಶ್ವನಾಥ್, ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಲಾಗಿದೆ. ಮಾಧ್ಯಮದ ಮೂಲಕ ನನ್ನ ಧ್ವನಿಯನ್ನು ಅಡಗಿಸಬಹುದು ಎಂದು ಕಾಂಗ್ರೆಸ್ ಸರ್ಕಾರ ಭಾವಿಸಿದೆ ಎಂದು ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.