ಕಳೆದ ಮೂರು ವರ್ಷಗಳಲ್ಲಿ ರಾಜ್ಯ ಸರ್ಕಾರ ಉತ್ತಮ ಆಡಳಿತ ನೀಡಲು ವಿಫಲವಾಗಿದೆ ಎಂಬ ನಿರ್ಣಯಕ್ಕೆ ಕಾಂಗ್ರೆಸ್ ಹೈಕಮಾಂಡ್ ಬಂದಿದೆ.
ಅದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಬದಲಾಯಿಸುವ ನಿರ್ಧಾರ ತೆಗೆದುಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಬುಧವಾರ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅಷ್ಟು ಸುಲಭವಾಗಿ ರಾಜೀನಾಮೆ ಕೊಡುವವರಲ್ಲ. ಮುಂದಿನ ಮುಖ್ಯಮಂತ್ರಿ ಯಾರೇ ಆದರೂ ಅವರು ಪೂರ್ಣಾವಧಿ ಮುಗಿಸುವುದಿಲ್ಲ ಎಂದು ನುಡಿದರು. ವಿಡಿಯೋ ಇಲ್ಲಿದೆ ನೋಡಿ.