ಸ್ಟಿಂಗ್ ಆಪರೇಷನ್ ಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಕ್ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ.
ಕುಮಾರಸ್ವಾಮಿ ಅವರು ತಮ್ಮ ಬಳಿ ಏನಾದ್ರೂ ಸಾಕ್ಷ್ಯಗಳಿದ್ದರೆ ಕೊಡಲಿ. ಹಿಟ್ ಆ್ಯಂಡ್ ರನ್ ಬೇಡ.
ಎಲ್ಲಾ ಆಯಾಮಗಳಲ್ಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೇಂದ್ರ ಸಚಿವ ಎಚ್ಡಿಕೆಗೆ ಏಕೆ ಇಷ್ಟು ಆತುರ ಏಕೆ?
ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆಯೂ ಎಚ್ಡಿಕೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ.
ಆದರೆ ಮೋದಿ ಸರ್ಕಾರವೇ ಪೊಲೀಸರಿಗೆ ಮೆಡಲ್ ಕೊಟ್ಟಿದೆ. ಇದಕ್ಕೆ ಅವರು ಏನು ಹೇಳುತ್ತಾರೆ? ಎಂದು ಖರ್ಗೆ ಸೋಮವಾರ ಪ್ರಶ್ನಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.