ಮಂಗಳವಾರ ನಸುಕಿನ ಜಾವ ಆಂಧ್ರಪ್ರದೇಶದ ದಕ್ಷಿಣ ಕರಾವಳಿಗೆ ‘ಮುರಸು’ ಚಂಡಮಾರುತ ಅಪ್ಪಳಿಸಿ ಭಾರಿ ಅನಾಹುತ ಸೃಷ್ಟಿಸಿದೆ.
ಚಂಡಮಾರುತದ ಅಬ್ಬರಕ್ಕೆ ಸಾವಿರಾರು ಮರಗಳು ಧರೆಗುರುಳಿದ್ದು, ನೂರಾರು ವಿದ್ಯುತ್ ಕಂಬಗಳು ಹಾನಿಗೊಳಗಾಗಿವೆ. ಮೀನುಗಾರಿಕಾ ದೋಣಿಗಳು ನಾಶವಾಗಿದ್ದು, ಹಲವು ಪ್ರದೇಶಗಳು ಜಲಾವೃತಗೊಂಡಿವೆ.
IMD ಪ್ರಕಾರ, ಪ್ರಕಾಶಂ ಜಿಲ್ಲೆಯ ಒಂಗೋಲ್ ಸಮೀಪ ನೆಲ್ಲೂರು ಮತ್ತು ನರಸಾಪುರ ನಡುವಿನ ಕರಾವಳಿಗೆ ಚಂಡಮಾರುತ ಅಪ್ಪಳಿಸಿದೆ.
ನಸುಕಿನ ಜಾವ 3.30ರಿಂದ 5.30ರ ಅವಧಿಯಲ್ಲಿ ಗಂಟೆಗೆ 100ರಿಂದ 110 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಿದೆ.
'ಮುರಸು' ಚಂಡಮಾರುತ ಆಂಧ್ರ ಕರಾವಳಿಯನ್ನು ದಾಟಿರುವುದಾಗಿ ಹವಾಮಾನ ಇಲಾಖೆ ನಿರ್ದೇಶಕಿ ಕೆ. ನಾಗರತ್ನ ಇತ್ತೀಚಿನ ಮಾಹಿತಿ ನೀಡಿದರು. ವಿಡಿಯೋ ಇಲ್ಲಿದೆ ನೋಡಿ.