ಬೆಂಗಳೂರಿನಲ್ಲಿ ನಡೆದ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಎಂ ಡಿಕೆ ಶಿವಕುಮಾರ್ ಮಾತನಾಡಿದರು.
ತೀವ್ರ ಬರಗಾಲದಿಂದ ಕರ್ನಾಟಕದ ರೈತರು ಸಂಕಷ್ಟದಲ್ಲಿದ್ದಾರೆ ಎಂದು ಇಂದು ಪ್ರಧಾನಿ ಮೋದಿ ಸಮ್ಮುಖದಲ್ಲಿಯೇ ಭಾಷಣದಲ್ಲಿ ಬರ ಪರಿಹಾರ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಪ್ರಸ್ತಾಪಿಸಿದರು.
ಬರಗಾಲದಿಂದ ಸುಮಾರು 62 ಸಾವಿರ ಕೋಟಿ ರೂ. ನಷ್ಟವಾಗಿದೆ. ಎನ್ಡಿಆರ್ಎಫ್ ನಿಧಿಯಡಿ ಬರ ಪರಿಹಾರ ನೀಡಬೇಕು. ಕಬ್ಬು ಬೆಳೆಗಾರರ ಸಮಸ್ಯೆ ಬಗ್ಗೆಯೂ ಸಹಕಾರ ನೀಡಬೇಕೆಂದು ಮನವಿ ಮಾಡಿದರು.
ಮೆಟ್ರೋ ಯೋಜನೆಗಳಲ್ಲಿ ರಾಜ್ಯದ ಆರ್ಥಿಕ ಹೊರೆ ಹೆಚ್ಚು, ಅದನ್ನು ನ್ಯಾಯಯುತ ರೀತಿಯಲ್ಲಿ ಹಂಚಿಕೊಳ್ಳಬೇಕು ಎಂದು ಪ್ರಧಾನಿಯವರನ್ನು ಕೋರಿದ್ದಾರೆ.
ಜಿಎಸ್ಟಿ ಸಂಗ್ರಹದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ, ಎಫ್ಡಿಐ ಒಳಹರಿವಿನಲ್ಲಿ ಮೊದಲ ಸ್ಥಾನದಲ್ಲಿದೆ, ಆದ್ದರಿಂದ ನಾವು ನಿಮ್ಮ ಸಹಾಯವನ್ನು ಬಯಸುತ್ತೇವೆ ಎಂದು ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.