ಬೆಂಗಳೂರಿನ ಜಿಗಣಿ ಬಳಿಯಿರುವ ಪ್ರಶಾಂತಿ ಕುಟೀರದ ಸುವರ್ಣ ಮಹೋತ್ಸವ ಹಾಗೂ ಹೆಚ್.ವಿ. ಶೇಷಾದ್ರಿ ಅವರ ಜನ್ಮಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಶುಕ್ರವಾರ ಭಾಗವಹಿಸಿದ್ದರು.
ಈ ವೇಳೆ ಮಾತನಾಡಿದ ಮೋದಿ, ವ್ಯಕ್ತಿ ನಿರ್ಮಾಣದ ಮೂಲಕ ರಾಷ್ಟ್ರ ನಿರ್ಮಾಣ ಎಂಬ ಧ್ಯೇಯಕ್ಕೆ ಶೇಷಾದ್ರಿ ಅವರು ತಮ್ಮ ಇಡೀ ಜೀವನವನ್ನು ಮುಡಿಪಾಗಿಟ್ಟಿದ್ದರು ಎಂದು ಹೇಳಿದರು.
ದೇಶವು ಯಶಸ್ಸಿನ ಉನ್ನತ ಶಿಖರಕ್ಕೇರಬೇಕಾದರೆ ಸಮರ್ಪಣಾ ಮನೋಭಾವ, ಸಾಮರ್ಥ್ಯ ಮತ್ತು ಶಿಸ್ತನ್ನು ಹೊಂದಿರುವ ನಾಗರಿಕರ ಅಗತ್ಯವಿದೆ ಎಂಬುದನ್ನು ಶೇಷಾದ್ರಿ ಅವರು ಅರಿತಿದ್ದರು ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಯೋಗದ ಅದ್ಭುತ ಶಕ್ತಿಯನ್ನು ಅನುಭವಿಸುವ ಅವಕಾಶ ತಮಗೆ ದೊರೆತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.