ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ರಾಜಕೀಯ ಭಾಷಣ ಮಾಡಿರುವ ಆರೋಪ ಕೇಳಿಬಂದಿದೆ.
ಪ್ರಧಾನಿ ಮೋದಿ ಅವರನ್ನು ಹೊಗಳುವ ಘೋಷಣೆಗಳನ್ನು ಕೂಗುವಂತೆ ವಿದ್ಯಾರ್ಥಿಗಳನ್ನು ಪ್ರೇರೇಪಿಸುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ.
ಇದು ಶೈಕ್ಷಣಿಕ ಸಂಸ್ಥೆಗಳನ್ನು ರಾಜಕೀಯ ಪ್ರಚಾರಕ್ಕಾಗಿ ಬಳಸುವ ಕುರಿತು ಚರ್ಚೆಗೆ ಎಡೆಮಾಡಿಕೊಟ್ಟಿದೆ.
ಈ ಘಟನೆಯು ನವೆಂಬರ್ 14 ರಂದು ಪುಂಜಾಲಕಟ್ಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ನಡೆದಿದೆ.
ವಿದ್ಯಾರ್ಥಿಗಳು ಮತ್ತು ಅಲ್ಲಿ ನೆರೆದಿದ್ದ ಇತರರನ್ನು ಉದ್ದೇಶಿಸಿ ಮಾತನಾಡಿದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಶಾಸಕರು, ಕಾಂಗ್ರೆಸ್ ಪಕ್ಷವನ್ನು ಟೀಕಿಸಿದರು. ವಿಡಿಯೋ ಇಲ್ಲಿದೆ ನೋಡಿ.