ಕೊಲೆಯಾಗಿದ್ದಾಳೆ ಎಂದು ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದ ಮಹಿಳೆಯೊಬ್ಬಳು ಏಳು ವರ್ಷಗಳ ನಂತರ ಜೀವಂತವಾಗಿ ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ಈ ಪ್ರಕರಣದಲ್ಲಿ ಮಾಡದ ತಪ್ಪಿಗೆ ಅಮಾಯಕ ಯುವಕನೊಬ್ಬ 30 ತಿಂಗಳು ಜೈಲು ಶಿಕ್ಷೆ ಅನುಭವಿಸಿರುವುದು ತನಿಖೆಯ ವೈಫಲ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ.
2019ರ ಜೂನ್‌ನಲ್ಲಿ ಪಾಂಡವಪುರದಿಂದ ನಾಪತ್ತೆಯಾಗಿದ್ದ ಮಂಜು ಎನ್. ಎಂಬ ಮಹಿಳೆ ಬುಧವಾರ ನಾಗಮಂಗಲ ತಾಲ್ಲೂಕಿನ ಮಾಯಿಗೋನಹಳ್ಳಿ ಗ್ರಾಮದಲ್ಲಿ ಪತ್ತೆಯಾಗಿದ್ದಾರೆ.
ಚಾಮರಾಜನಗರ ಮೂಲದ ನಾಗೇಂದ್ರ ಎಂಬುವವರನ್ನು ವಿವಾಹವಾಗಿರುವ ಅವರು, ಅವರೊಂದಿಗೆ ಅಲ್ಲಿ ವಾಸಿಸುತ್ತಿದ್ದರು.
ಮಂಜು ಅವರನ್ನು ಕೊಲೆ ಮಾಡಿದ ಆರೋಪದ ಮೇಲೆ ಎರಡೂವರೆ ವರ್ಷ ಜೈಲಿನಲ್ಲಿ ಕಳೆದಿದ್ದ ರಾಜೇಶ್ ಎಂ.ಆರ್ ಎಂಬುವರಿಗೆ ಈ ಬೆಳವಣಿಗೆಯಿಂದಾಗಿ ನಿರಾಳ ಸಿಕ್ಕಂತಾಗಿದೆ. ವಿಡಿಯೋ ಇಲ್ಲಿದೆ ನೋಡಿ.