ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಸಿಆರ್ಪಿಎಫ್ ಚೆಕ್ಪೋಸ್ಟ್ ಮೇಲೆ ನಡೆದ ಉಗ್ರರ ದಾಳಿಗೆ ಸಂಬಂಧಿಸಿದಂತೆ ಭದ್ರತಾ ಪಡೆಗಳಿಗೆ ಮಹತ್ವದ ಸುಳಿವು ಲಭ್ಯವಾಗಿದೆ.
ದಾಳಿ ನಡೆಸುವ ಒಂದು ದಿನದ ಮುನ್ನ ಲಷ್ಕರ್-ಇ-ತೊಯ್ಬಾ (LeT) ಕಮಾಂಡರ್ ಲತೀಫ್ ಭಟ್ ಮತ್ತು ಆತನ ಸಹಚರ ಉಮರ್ ನಿಸಾರ್ ದಾರ್ ಸ್ಥಳ ಪರಿಶೀಲನೆ (ರೆಕ್ಕಿ) ನಡೆಸಿರುವುದು ಪತ್ತೆಯಾಗಿದೆ.
ಸಿಸಿಟಿವಿ ದೃಶ್ಯಗಳ ಪ್ರಕಾರ, ನವೆಂಬರ್ 10ರಂದು ಉಗ್ರರು ಮಿರ್ ಬಜಾರ್, ಅಖ್ರಾನ್, ಹಬ್ಲಿಶ್ ಮತ್ತು ಕಿಲಾಮ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಸುತ್ತಾಡಿದ್ದರು.
ನವೆಂಬರ್ 11ರಂದು ಉಮರ್ ನಿಸಾರ್ ದಾರ್, LeT ಕಮಾಂಡರ್ ಲತೀಫ್ ಭಟ್ ಜೊತೆಗೂಡಿ ಅಖ್ರಾನ್ನಲ್ಲಿ ಸಿಆರ್ಪಿಎಫ್ ನಾಕಾ ಮೇಲೆ ದಾಳಿ ನಡೆಸಿ ಪರಾರಿಯಾಗಿದ್ದರು.
ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದರು. ಘಟನೆಯಲ್ಲಿ ಮೂವರು ಕೇಂದ್ರ ಮೀಸಲು ಪೊಲೀಸ್ ಪಡೆಯ ಸಿಬ್ಬಂದಿ ಗಾಯಗೊಂಡಿದ್ದರು. ವಿಡಿಯೋ ಇಲ್ಲಿದೆ ನೋಡಿ.