ಅವರಿಗೆ ನಮ್ಮನ್ನು ನೆನಪಿಸಿಕೊಳ್ಳದಿದ್ದರೇ ಊಟ ಸೇರಲ್ಲ, ನಿದ್ದೆ ಬರಲ್ಲ, ಇನ್ನೊಂದು ಆಗಲ್ವಂತೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಮಾಜಿ ಸಂಸದ ಡಿಕೆ ಸುರೇಶ್ ಹರಿಹಾಯ್ದಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಸುರೇಶ್, "ನೋಡ್ರಿ, ನಾಲಿಗೆಯಲ್ಲಿ ಮೂಳೆ ಇಲ್ಲ ಅಂತ ಏನೇನೋ ಮಾತಾಡ್ತಾ ಇರ್ತಾರೆ, ಏನು ಮಾಡೋಕಾಗುತ್ತೆ? ಎಂದು ಹೇಳಿದ್ದಾರೆ.
ಮೇಕೆದಾಟು ಯೋಜನೆ ಮತ್ತು ಮಂಗಳೂರಿನಲ್ಲಿ ನಡೆದ ಕ್ಯಾಬಿನೆಟ್ ಸಭೆ ಕೇವಲ ವ್ಯವಹಾರ ವಿಸ್ತರಣೆಗಾಗಿ ನಡೆದಿವೆ ಎಂಬ HDK ಆರೋಪಕ್ಕೆ ಸುರೇಶ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು. ವಿಡಿಯೋ ಇಲ್ಲಿದೆ ನೋಡಿ.