ವಿಡಿಯೋ

Watch | ಏಳು ಅಧಿಕಾರಿಗಳಿಗೆ ಸೇರಿದ ಕಚೇರಿ-ನಿವಾಸಗಳ ಮೇಲೆ ಲೋಕಾಯುಕ್ತ ದಾಳಿ

ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ, ರಾಜ್ಯದಾದ್ಯಂತ ಏಳು ಸರ್ಕಾರಿ ಅಧಿಕಾರಿಗಳಿಗೆ ಸೇರಿದ ಸ್ಥಳಗಳಲ್ಲಿ ಲೋಕಾಯುಕ್ತ ತಂಡ ಬುಧವಾರ ಬೆಳಿಗ್ಗೆ ದಾಳಿ ನಡೆಸಿದೆ.

ಹುಬ್ಬಳ್ಳಿಯಲ್ಲಿ, ಕೆಎಸ್‌ಆರ್‌ಟಿಸಿ (KSRTC) ಮಾಜಿ ಅಧಿಕಾರಿ ಎಸ್.ವಿ. ಅತ್ತಿಕಟ್ಟಿಮಠ ಅವರ ನಿವಾಸದ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ.

ಬೀದರ್ ನಲ್ಲಿ ಬಿಆರ್‌ಐಎಂಎಸ್ (BRIMS) ನರ್ಸಿಂಗ್ ಕಾಲೇಜು ಪ್ರಾಂಶುಪಾಲ ರಾಜಕುಮಾರ್ ಮಲಗೆ ಅವರಿಗೆ ಸಂಬಂಧಿಸಿದ ಐದು ಸ್ಥಳಗಳಲ್ಲಿ ಪರಿಶೀಲನೆ ನಡೆಸಲಾಗಿದೆ. ದಾಖಲೆಗಳು ಮತ್ತು ವಾಹನಗಳನ್ನು ಪರಿಶೀಲಿಸಲಾಗಿದೆ.

ಚಿತ್ರದುರ್ಗದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ (District Surgeon) ಡಾ. ಎಸ್.ಪಿ. ರವೀಂದ್ರ ಮತ್ತು ತೂಕ ಹಾಗೂ ಅಳತೆ ಇಲಾಖೆಯ ಇನ್ಸ್‌ಪೆಕ್ಟರ್ ವೆಂಕಟೇಶ್ ಅವರ ನಿವಾಸಗಳ ದಾಳಿ ನಡೆಸಿದ್ದಾರೆ. ಜಿಲ್ಲಾ ಆಸ್ಪತ್ರೆ ಮತ್ತು ಅಕ್ಷಯ ಗ್ಲೋಬಲ್ ಆಸ್ಪತ್ರೆಯಲ್ಲೂ ಶೋಧ ನಡೆಸಲಾಗಿದೆ.

ಹಾಸನ ಜಿಲ್ಲೆಯ ಸಕಲೇಶಪುರ ಆರ್‌ಎಫ್‌ಒ (RFO) ಹೇಮಂತ್ ಕುಮಾರ್ ಅವರಿಗೆ ಸಂಬಂಧಿಸಿದ ಐದು ಸ್ಥಳಗಳಲ್ಲಿ ಲೋಕಾಯುಕ್ತರು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Lateef Bhat ಎನ್‌ಕೌಂಟರ್‌; ಎ ಕೆಟಗರಿ ಉಗ್ರ, ಮರಗೆಲಸ ಮಾಡುತ್ತಿದ್ದವ ಉಗ್ರನಾಗಿದ್ದೇ ರೋಚಕ; LeT ಸೇರಿದ ಒಂದೇ ವರ್ಷಕ್ಕೆ ಹೆಡೆಮುರಿ ಕಟ್ಟಿದ ಭಾರತೀಯ ಸೇನೆ!

'ಕೆಲವು ಲೆಕ್ಕಾಚಾರಗಳನ್ನು ತಣ್ಣಗೇ ಮುಗಿಸಬೇಕು': ಉಗ್ರ ಲತೀಫ್ ಭಟ್ ಎನ್ಕೌಂಟರ್ ಬೆನ್ನಲ್ಲೇ CRPF ಮುಖ್ಯಸ್ಥರ ಪೋಸ್ಟ್ ವೈರಲ್!

'ಅಪರಿಚಿತರ ಜೊತೆ ಪ್ರಯಾಣಿಸಬೇಡಿ': ಎಚ್ಚರಿಕೆ ನಿರ್ಲಕ್ಷಿಸಿ ಸ್ಥಳೀಯರೊಂದಿಗೆ ಬ್ರೆಜಿಲ್ ಮಹಿಳೆ ಮರುಭೂಮಿಯಲ್ಲಿ ಕ್ಯಾಂಪಿಂಗ್, ಮುಂದೇನಾಯ್ತು?

ಉತ್ತರ ಪ್ರದೇಶದಲ್ಲಿ ಮತ್ತೆ ಎನ್ಕೌಂಟರ್; ಪೊಲೀಸರ ಗುಂಡಿಗೆ Gangster ವಹೀದ್ ಅನ್ಸಾರಿ ಹತ

Kulgam Encounter: LeT ಸಂಘಟನೆಯ ಪ್ರಮುಖ ಉಗ್ರ ಲತೀಫ್ ಭಟ್ ಹೊಡೆದುರುಳಿಸಿದ ಭಾರತೀಯ ಸೇನೆ! ಮಸೀದಿಯಲ್ಲಿ ಅಡಗಿದ್ದ ಭಯೋತ್ಪಾದಕ!