ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸಲ್ಲಿಸಿದ್ದ ಹೆಚ್ಚುವರಿ ನೀರು ಬಿಡುಗಡೆ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ಕರ್ನಾಟಕದಿಂದ ಹೆಚ್ಚುವರಿಯಾಗಿ 11 ಟಿಎಂಸಿ ನೀರು ಬಿಡುಗಡೆ ಮಾಡಲು ನಿರ್ದೇಶನ ನೀಡುವಂತೆ ಕೋರಿ ತಮಿಳುನಾಡು ಎರಡು ಅರ್ಜಿಗಳನ್ನು ಸಲ್ಲಿಸಿತ್ತು.
ಮೂರನೇ ಬಾರಿಗೆ ಅರ್ಜಿ ಸಲ್ಲಿಸಿದರೂ ಆ ಅರ್ಜಿಯನ್ನೂ ವಜಾಗೊಳಿಸಲಾಗುವುದು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
ಕಾವೇರಿ ನೀರು ವಿವಾದ ಹಾಗೂ ಸುಪ್ರೀಂ ಕೋರ್ಟ್‌ನಲ್ಲಿ ತಮಿಳುನಾಡಿನ ಅರ್ಜಿಯನ್ನು ರದ್ದುಗೊಳಿಸಿದ ಕುರಿತು ಸಿಎಂ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದರು.
ತಮಿಳುನಾಡು ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ ಬೆನ್ನಲ್ಲೇ, ಡಿಎಂಕೆ ವಕ್ತಾರ ಟಿ.ಕೆ.ಎಸ್. ಇಳಂಗೋವನ್ ಟಿವಿಕೆ ವಿಜಯ್ ಸರ್ಕಾರವನ್ನು ಟೀಕಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.