ರಾಜ್ಯದ ವಿವಿಧ ಜಿಲ್ಲೆಗಳ ಆಶಾ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅಹೋರಾತ್ರಿ ಪ್ರತಿಭಟನೆ ಮುಂದುವರಿಸಿದ್ದಾರೆ.
ತಿಂಗಳಿಗೆ 15,000 ರೂ ಗೌರವಧನ, 5 ಲಕ್ಷ ರೂ ನಿವೃತ್ತಿ ಸೌಲಭ್ಯ ಹಾಗೂ ಸಮಸ್ತ ಮೊಬೈಲ್ ಅಪ್ಲಿಕೇಷನ್ ಹಿಂಪಡೆಯುವಂತೆ ಕಾರ್ಯಕರ್ತೆಯರು ಆಗ್ರಹಿಸಿದ್ದಾರೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರತಿಭಟನೆ ಹಿಂಪಡೆಯುವಂತೆ ಕಾರ್ಯಕರ್ತೆಯರ ಮನವೊಲಿಸಲು ಪ್ರಯತ್ನಿಸಿದರೂ, ಫಲ ಕೊಟ್ಟಿಲ್ಲ.
ಬೇಡಿಕೆಗಳನ್ನು ಈಡೇರಿಸುವ ಕುರಿತು ಸರ್ಕಾರ ಲಿಖಿತ ಆದೇಶ ಹೊರಡಿಸುವವರೆಗೂ ಪ್ರತಿಭಟನೆ ಮುಂದುವರಿಸುವುದಾಗಿ ಪ್ರತಿಭಟನಾಕಾರರು ತಿಳಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.