Watch | ಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ನಯನಾ ಮೋಟಮ್ಮ ರಾಜೀನಾಮೆ
ಕಾಡಾನೆಗಳ ಸ್ಥಳಾಂತರ ಕುರಿತಂತೆ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ಮೂಡಿಗೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಸೋಮವಾರ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಹಾಸನದಲ್ಲಿ ಕಾಡಾನೆಗಳ ದಾಳಿ ಬಳಿಕ ಸ್ಥಳೀಯರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಹೀಗಾಗಿ ಆನೆಗಳ ಸ್ಥಳಾಂತರಕ್ಕೆ ಮುಂದಾಗಿದ್ದ ಸರ್ಕಾರ ಹಾಸನದಿಂದ ಭದ್ರಾ ಅಭಯಾರಣ್ಯಕ್ಕೆ ರಾತ್ರೋರಾತ್ರಿ ಓಡಿಸಿತ್ತು.
ಆದರೆ ಇದಕ್ಕೆ ಚಿಕ್ಕಮಗಳೂರು ಜಿಲ್ಲೆಯ ಶಾಸಕರಾದ ನಯನಾ ಮೋಟಮ್ಮ ವಿರೋಧ ವ್ಯಕ್ತಪಡಿಸಿದ್ದರು.
ಈಗಾಗಲೇ ಸ್ಥಳಾಂತರ ಮಾಡಲಾಗಿರುವ ಆನೆಗಳನ್ನು ವಾಪಸ್ ಓಡಿಸಿಕೊಂಡು ಹೋಗಬೇಕು ಇಲ್ಲವಾದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ನಿನ್ನೆ ಸುದ್ದಿಗೋಷ್ಠಿಯಲ್ಲಿ ಹೇಳಿದ್ದರು. ವಿಡಿಯೋ ಇಲ್ಲಿದೆ ನೋಡಿ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.