Watch | ಜಪಾನ್‌ನಿಂದ ಪ್ರತಿಭಟನೆ ಕೈಬಿಡಿ ಎಂದ CM; ಸಿಎಂ ಬರಲಿ ಎಂದು 'ಆಶಾ' ಪಟ್ಟು!
ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸುವುದಾಗಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭರವಸೆ ನೀಡಿದ್ದು, ಪ್ರತಿಭಟನೆಯನ್ನು ಕೈಬಿಡಬೇಕೆಂದು ಮಂಗಳವಾರ ಮನವಿ ಮಾಡಿದ್ದಾರೆ.
ಜಪಾನ್ ಪ್ರವಾಸದಲ್ಲಿರುವ ಸಿಎಂ, ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾರ್ಯಕರ್ತೆಯರ ಮುಖಂಡರೊಂದಿಗೆ ವಿಡಿಯೋ ಕರೆ ಮೂಲಕ ಮಾತನಾಡಿದರು.
"ನಿಮ್ಮ ಸಮಸ್ಯೆಗಳನ್ನು ನಾವು ಖಂಡಿತವಾಗಿಯೂ ಪರಿಹರಿಸುತ್ತೇವೆ. ದಯವಿಟ್ಟು ಪ್ರತಿಭಟನೆಯನ್ನು ಕೈಬಿಡಿ ಎಂದು ಶಿವಕುಮಾರ್ ಮನವಿ ಮಾಡಿದರು.
ಆದರೆ, ಬೇಡಿಕೆಗಳನ್ನು ಈಡೇರಿಸುವ ಆದೇಶವನ್ನು ಹೊರಡಿಸುವವರೆಗೂ ಪ್ರತಿಭಟನೆಯನ್ನು ಕೊನೆಗೊಳಿಸುವುದಿಲ್ಲ ಎಂದು 'ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ' ತಿಳಿಸಿದೆ.
ಆಶಾ ಕಾರ್ಯಕರ್ತೆಯರು ನವೆಂಬರ್ 17 ರಿಂದ ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಮಂಗಳವಾರ ಎಂಟನೇ ದಿನಕ್ಕೆ ಕಾಲಿಟ್ಟಿದೆ. ವಿಡಿಯೋ ಇಲ್ಲಿದೆ ನೋಡಿ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.