Watch | ಆಶಾ ಕಾರ್ಯಕರ್ತರು ಇಲ್ಲದಿದ್ದರೂ ಆರೋಗ್ಯ ಇಲಾಖೆ ನಡೆಯುತ್ತೆ!
ವೇತನ ಹೆಚ್ಚಳಕ್ಕೆ ಆಗ್ರಹಿಸಿ ಕಳೆದ 10 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ವಿರುದ್ಧ ಆರೋಗ್ಯ ಸಚಿವ ಯು.ಟಿ.ಖಾದರ್ ಗುರುವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆಶಾ ಕಾರ್ಯಕರ್ತರು ಇಲ್ಲದಿದ್ದರೂ ಆರೋಗ್ಯ ಇಲಾಖೆ ನಡೆಯುತ್ತದೆ. ಆಶಾಗಳು ಇಲ್ಲ ಅಂದ್ರೆ ಡಾಕ್ಟರ್, ನರ್ಸ್‌ಗಳು ಇಲ್ವಾ? ಎಂದು ಯುಟಿ ಖಾದರ್ ಪ್ರಶ್ನಿಸಿದ್ದಾರೆ.
ಆಶಾಗಳ ಸೇವೆ ಇಲ್ಲದಿದ್ದರೂ ಆರೋಗ್ಯ ಇಲಾಖೆ ನಡೆಯುತ್ತದೆ ಎಂಬುದನ್ನು ಆಶಾಗಳೇ ತೋರಿಸಿ ಕೊಟ್ಟಿದ್ದಾರೆ.
ಪ್ರತಿಭಟನೆಯಿಂದ ರಾಜ್ಯದಲ್ಲಿ ಏನು ಸಮಸ್ಯೆ ಆಗಿಲ್ಲ. ಹೆರಿಗೆ ಆಗ್ತಿದೆ, ಎಲ್ಲಾ ಆಗ್ತಿದೆ ಎಂದಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.