Watch | ಅನುಭವ ಮಂಟಪ ಉತ್ಸವದಲ್ಲಿ ಧರ್ಮ ದಂಗಲ್: ಅರ್ಧಕ್ಕೆ ಎದ್ದು ಹೋದ ವಿಜಯೇಂದ್ರ
ಬಸವಕಲ್ಯಾಣದ ಅನುಭವ ಮಂಟಪದ ಆವರಣದಲ್ಲಿ ನಡೆಯುತ್ತಿರುವ 47ನೇ ಶರಣ ಕಮ್ಮಟ ಹಾಗೂ ಅನುಭವ ಮಂಟಪ ಉತ್ಸವವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಶನಿವಾರ ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಅವರು, ಸರ್ಕಾರದ ಸವಲತ್ತುಗಳಿಗಾಗಿ ಪ್ರತ್ಯೇಕ ಧರ್ಮದ ವಿಚಾರ ಮಾಡದೆ “ಹಿಂದೂ ನಾವೆಲ್ಲರೂ ಒಂದು” ಎಂಬ ನಿಲುವಿನೊಂದಿಗೆ ಒಗ್ಗಟ್ಟಾಗಿರಬೇಕು ಎಂದು ಹೇಳಿದರು.
ಪರೋಕ್ಷವಾಗಿ ಲಿಂಗಾಯತ ಪ್ರತ್ಯೇಕ ಧರ್ಮದ ಬೇಡಿಕೆಗೆ ವಿರೋಧ ವಿಜಯೇಂದ್ರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದ್ದು, ಅವರ ಹೇಳಿಕೆಗೆ ಲಿಂಗಾಯತ ಸಮುದಾಯದ ಮುಖಂಡರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಘಟನೆ ನಡೆದಿದೆ. ವಿಡಿಯೋ ಇಲ್ಲಿದೆ ನೋಡಿ.