Watch | ₹13 ರಿಂದ 16 ಸಾವಿರವರೆಗೆ ಪಡೆಯುವ ಕಾರ್ಯಕರ್ತೆಯರೂ ಇದ್ದಾರೆ...
‘ಆಶಾ ಕಾರ್ಯಕರ್ತೆಯರು ಇಲ್ಲದಿದ್ದರೂ ಆರೋಗ್ಯ ವ್ಯವಸ್ಥೆ ನಡೆಯುತ್ತದೆ’ ಎಂದಿರುವ ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿಕೆ ವಿವಾದಕ್ಕೆ ಕಾರಣವಾಗಿದ.
ಈ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಖಾದರ್, ತಮ್ಮ ಮಾತನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಶಾ ಕಾರ್ಯಕರ್ತೆಯರ ಸೇವೆಯನ್ನು ಕಡೆಗಣಿಸುವ ಉದ್ದೇಶ ತಮ್ಮ ಹೇಳಿಕೆಯಲ್ಲಿ ಇರಲಿಲ್ಲ.
ಅವರು ಕೇಂದ್ರ ಸರಕಾರದ ರಾಷ್ಟ್ರೀಯ ಆರೋಗ್ಯ ಅಭಿಯಾನದ (ಎನ್‌ಎಚ್‌ಎಂ) ಅಡಿಯಲ್ಲಿ ನೇಮಕಗೊಂಡಿದ್ದು, ಆರಂಭದಲ್ಲಿ ಅತ್ಯಲ್ಪಪ್ರೋತ್ಸಾಹಧನ ನೀಡಲಾಗುತ್ತಿತ್ತು.
ಈ ಹಿನ್ನೆಲೆಯಲ್ಲಿ 2014ರಲ್ಲಿ ತಾನು ಆರೋಗ್ಯ ಸಚಿವರಾಗಿದ್ದಾಗ ಕೇಂದ್ರ ಸರಕಾರ ನೀಡುವ ಅನುದಾನಕ್ಕೆ ಸಮನಾಗಿ ರಾಜ್ಯ ಸರಕಾರವೂ ಮ್ಯಾಚಿಂಗ್ ಗ್ರಾಂಟ್ ನೀಡುವ ನಿರ್ಧಾರ ಕೈಗೊಂಡಿತ್ತು.
ಆನಂತರದ ದಿನಗಳಲ್ಲಿ ಕೇಂದ್ರದ ಅನುದಾನ ಕಡಿಮೆಯಾದ ಸಂದರ್ಭದಲ್ಲಿ ರಾಜ್ಯ ಸರಕಾರವೇ ಆಶಾ ಕಾರ್ಯಕರ್ತೆಯರಿಗೆ ಆರ್ಥಿಕ ನೆರವು ನೀಡುವ ಜವಾಬ್ದಾರಿ ವಹಿಸಿಕೊಂಡಿದೆ.
ಪ್ರಸಕ್ತ ಕನಿಷ್ಠ 8 ಸಾವಿರ ರೂ. ಪ್ರೋತ್ಸಾಹಧನ ದೊರೆಯುತ್ತಿದ್ದು, ಕೆಲಸದ ಪ್ರಮಾಣಕ್ಕೆ ಅನುಗುಣವಾಗಿ 13 ರಿಂದ 16 ಸಾವಿರ ರೂ ವರೆಗೆ ಪಡೆಯುವ ಕಾರ್ಯಕರ್ತೆಯರೂ ಇದ್ದಾರೆ ಎಂದು ವಿವರಿಸಿದರು. ವಿಡಿಯೋ ಇಲ್ಲಿದೆ ನೋಡಿ.