ಕರ್ನಾಟಕದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು 'ದೊಡ್ಡ ವಂಚನೆ' ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಣ್ಣಿಸಿದ್ದಾರೆ.
SIR ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ಹೆಸರುಗಳನ್ನು ಅಳಿಸಲು ಕೆಲವರು ಹಲವು ಅರ್ಜಿಗಳನ್ನು ಸಲ್ಲಿಸುವ ಮೂಲಕ 'ಸಂಚು' ನಡೆಸುತ್ತಿದ್ದಾರೆ ಎಂದು ಸಿಎಂ ಆರೋಪಿಸಿದರು.
ಬೆಂಗಳೂರಿನಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿದ ಅವರು, ಮತದಾರರ ಪಟ್ಟಿಯಿಂದ “ಅಲ್ಪಸಂಖ್ಯಾತರು, ದಲಿತರು ಮತ್ತು ST ಮತದಾರರ” ಹೆಸರುಗಳನ್ನು ಅಳಿಸುವ ಈ ಸಂಚಿನಲ್ಲಿ ಬಿಜೆಪಿ ಭಾಗಿಯಾಗಿದೆ ಎಂದರು.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಗಮನಕ್ಕೆ ಬಾರದೆ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ 'ಅಕ್ರಮ' ಮತದಾರರ ಹೆಸರುಗಳನ್ನು ಅಳಿಸಲು ಸಾಧ್ಯವಿಲ್ಲ ಎಂದು ಡಿಕೆಶಿ ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.