ಜಪಾನ್‌ನಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್‌ನಲ್ಲಿ ಕರ್ನಾಟಕದ ಅಥ್ಲೀಟ್ ಎಂ.ಆರ್. ಪೂವಮ್ಮ ಅವರು ಅದ್ಭುತ ಸಾಧನೆ ಮಾಡಿದ್ದಾರೆ.
ಮಹಿಳೆಯರ 4x400 ಮೀಟರ್ ರಿಲೇಯಲ್ಲಿ ಚಿನ್ನದ ಪದಕ ಹಾಗೂ ಮಿಶ್ರ 4x400 ಮೀಟರ್ ರಿಲೇಯಲ್ಲಿ ಬೆಳ್ಳಿಯ ಪದಕ ಗೆಲ್ಲುವ ಮೂಲಕ ದೇಶ ಮತ್ತು ರಾಜ್ಯದ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಏಷ್ಯನ್ ಕ್ರೀಡಾಕೂಟದ ಚಿನ್ನದ ಪದಕ ವಿಜೇತೆ ಎಂ.ಆರ್. ಪೂವಮ್ಮ ಅವರಿಗೆ ಶುಕ್ರವಾರ ಮಂಗಳೂರು ವಿಮಾನ ನಿಲ್ದಾಣದಲ್ಲಿ ಭವ್ಯ ಸ್ವಾಗತ ಕೋರಲಾಯಿತು.
ನನಗೆ ತುಂಬಾ ಹೆಮ್ಮೆ ಎನಿಸುತ್ತಿದೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಗೋವಿಂದರಾಜ್ ಅವರು ನನಗೆ ಕರೆ ಮಾಡಿ ಅಭಿನಂದನೆ ಸಲ್ಲಿಸಿದರು.
ನಗದು ಬಹುಮಾನದ ಮೊತ್ತವನ್ನು ಹೆಚ್ಚಿಸುವುದಾಗಿ ಅವರು ಭರವಸೆ ನೀಡಿದ್ದು, ಇದು ಮುಂದಿನ ಕ್ರೀಡಾಪಟುಗಳಿಗೆ ಉತ್ತೇಜನಕಾರಿಯಾಗಲಿದೆ ಎಂದು ಅವರು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.