ಮಹಿಳೆಯರೊಂದಿಗೆ ಪೊಲೀಸ್ ಸಿಬ್ಬಂದಿಯೊಬ್ಬರು ಅನುಚಿತವಾಗಿ ವರ್ತಿಸಿದರೆನ್ನಲಾದ ಘಟನೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಹಲವರನ್ನು ದೆಹಲಿ ಪೊಲೀಸರು ಸೋಮವಾರ ವಶಕ್ಕೆ ಪಡೆದಿದ್ದಾರೆ.
ಅಕ್ಟೋಬರ್ 3 ರಂದು ಜಂತರ್ ಮಂತರ್‌ನಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ ಪ್ರತಿಭಟನೆಯನ್ನು ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಯಿಂದ ಲೈಂಗಿಕ ಕಿರುಕುಳವಾಗಿದೆ ಎಂದು ಮೂವರು ಮಹಿಳಾ ಪತ್ರಕರ್ತೆಯರು ದೆಹಲಿ ಪೊಲೀಸರಿಗೆ ದೂರು ನೀಡಿದ್ದರು.
ಈ ಬೆಳವಣಿಗೆ ಹಿನ್ನೆಲೆಯಲ್ಲಿ ಪಾರ್ಲಿಮೆಂಟ್ ಸ್ಟ್ರೀಟ್ ನಲ್ಲಿರುವ ಪೊಲೀಸ್ ಠಾಣೆಯ ಹೊರಗೆ ಹಲವಾರು ಮಂದಿ ಸೋಮವಾರ ಪ್ರತಿಭಟನೆ ನಡೆಸುತ್ತಿದ್ದರು. ವಿಡಿಯೋ ಇಲ್ಲಿದೆ ನೋಡಿ.