ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗುರುವಾರ ಹೇಳಿಕೆ ನೀಡಿದ್ದಾರೆ.
ಕೆಲ ಸಚಿವರಿಗೆ ಸ್ಟಿಂಗ್ ಆಪರೇಷನ್ ಬಗ್ಗೆ ಸಚಿವ ಸಂಪುಟ ಸಭೆಯಲ್ಲೇ ಎಚ್ಚರಿಕೆ ನೀಡಿರುವ ವಿಚಾರದ ಕುರಿತು ದೆಹಲಿಯಲ್ಲಿ ಪ್ರತಿಕ್ರಿಯಿಸಿದ ಅವರು, ತಮ್ಮ ಬಳಿ ಈ ಬಗ್ಗೆ ಎಲ್ಲ ಮಾಹಿತಿಯೂ ಇದೆ ಎಂದಿದ್ದಾರೆ.
ಮುಖ್ಯಮಂತ್ರಿ ಆದ ಬಳಿಕ ತಮ್ಮನ್ನೇ ಟ್ರ್ಯಾಪ್ ಮಾಡಲು ಕೆಲವರು ಪ್ರಯತ್ನಿಸಿದ್ದರು. ತಮ್ಮ ಬಳಿ ಕೆಲವರು ಬಂದಿದ್ದರು.
ಫೋಟೋ ಬೇಕಿದ್ದರೆ ನೀಡುತ್ತೇನೆ ಎಂದಿರುವ ಡಿಕೆ ಶಿವಕುಮಾರ್, ಚರ್ಚೆಗೆಂದು ಬಂದು ಏನೇನು ಮಾಡಿದ್ದಾರೆ ಎಂಬುದು ತಮಗೆ ಗೊತ್ತಿದೆ.
ಈ ವಿಚಾರದ ಹಿಂದಿನ ಪಿತಾಮಹ ಯಾರು ಎಂಬುದೂ ಗೊತ್ತಿದೆ. ಯಾರು ಹಣಕಾಸಿನ ನೆರವು ನೀಡುತ್ತಿದ್ದಾರೆ ಎಂಬ ಮಾಹಿತಿಯೂ ಇದೆ ಎಂದು ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.