ಕರ್ನಾಟಕವು ತೀವ್ರ ಬರಗಾಲವನ್ನು ಎದುರಿಸುತ್ತಿದ್ದು, ರೈತರು ಬೆಳೆದ ಬೆಳೆಗಳು ಸಂಪೂರ್ಣವಾಗಿ ನಾಶವಾಗಿವೆ ಮತ್ತು ಅವರು ತೀವ್ರ ಸಂಕಷ್ಟದಲ್ಲಿದ್ದಾರೆ.
ರೈತರನ್ನು ರಕ್ಷಿಸುವುದು ನಮ್ಮ ಸರ್ಕಾರದ ಮೊದಲ ಆದ್ಯತೆಯಾಗಿದೆ ಮತ್ತು ಅಗತ್ಯವಿದ್ದರೆ ಅವರಿಗೆ ಬೆಂಬಲ ನೀಡಲು ಸಾಲ ಪಡೆಯಲೂ ನಾವು ಸಿದ್ಧರಿದ್ದೇವೆ ಎಂದು ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಗುರುವಾರ ಹೇಳಿದರು.
ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಕಲಮಂಗಿ ಗ್ರಾಮದಲ್ಲಿರುವ ನಾಗಮ್ಮ ಶರಣೇಗೌಡ ಅವರ ಜಮೀನಿಗೆ ಭೇಟಿ ನೀಡಿ ಬೆಳೆ ಹಾನಿಯನ್ನು ಪರಿಶೀಲಿಸಿದ ನಂತರ, ರೈತರೊಂದಿಗೆ ನಡೆಸಿದ ಸಂವಾದದ ವೇಳೆ ಅವರು ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ.