ಚಿತ್ರದುರ್ಗದಲ್ಲಿ ನಡೆದ ಮದಕರಿ ನಾಯಕ ಜಯಂತೋತ್ಸವ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕ ವಿ.ಎಸ್. ಉಗ್ರಪ್ಪ ನಟ ಕಿಚ್ಚ ಸುದೀಪ್ ವಿರುದ್ಧ ವಾಗ್ದಾಳಿ ನಡೆಸಿದ್ದರು.
ನಾಯಕ ಸಮುದಾಯದ ಮೀಸಲಾತಿ ಹೋರಾಟಕ್ಕೆ ಬೀದಿಗೆ ಬರುವಂತೆ ಸುದೀಪ್ ಗೆ ರೋಷಾವೇಶದಿಂದ ಸವಾಲು ಹಾಕಿದ್ದರು.
ಇದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಚಿವ ರಾಜು ಗೌಡ, ಕಲಾವಿದನಿಗೆ ಜಾತಿ ಇಲ್ಲ, ಸುದೀಪ್ ಬಗ್ಗೆ ಮಾತನಾಡಿದ್ದಕ್ಕೆ ಕ್ಷಮೆ ಕೇಳಬೇಕು ಎಂದು ತಿರುಗೇಟು ನೀಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.