ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ತೀವ್ರವಾಗಿ ಟೀಕಿಸಿದ್ದಾರೆ.
ಗುಜರಾತ್ ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತು ಪ್ರತಿಕ್ರಿಯಿಸಿದ ಅಮಿತ್ ಶಾ, ಈ ದೇಶದ ಜನರು ನರೇಂದ್ರ ಮೋದಿ ಜೊತೆ, ಬಿಜೆಪಿ ಜೊತೆ, NDA ಜೊತೆ ಇದ್ದಾರೆ.
2029ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಮತ್ತೊಂದು "ಭಾರಿ ಸೋಲು" ಕಾದಿದೆ ಎಂದು ಅಮಿತ್ ಶಾ ಭವಿಷ್ಯ ನುಡಿದರು.
ಕಳೆದ 41 ವರ್ಷಗಳಲ್ಲಿ ಗುಜರಾತ್ ರಾಜ್ಯದಲ್ಲಿ ಚುನಾವಣೆಗಳನ್ನು ಗೆಲ್ಲಲು ಕಾಂಗ್ರೆಸ್ ವಿಫಲವಾಗಿದೆ; ಚುನಾವಣಾ ಫಲಿತಾಂಶಗಳನ್ನು ತಳ್ಳಿಹಾಕುವ ಬದಲು ರಾಹುಲ್ ಗಾಂಧಿ ಆತ್ಮಾವಲೋಕನ ಮಾಡಿಕೊಳ್ಳಬೇಕು;
ಪಶ್ಚಿಮ ಬಂಗಾಳ, ತಮಿಳುನಾಡು, ಪುದುಚೇರಿಯಲ್ಲಿ ನಡೆದ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಒಂದು ಸ್ಥಾನವನ್ನೂ ಗೆಲ್ಲಲು ಸಾಧ್ಯವಾಗಿಲ್ಲ, ಆದರೆ ಬಿಜೆಪಿ ಗೆಲುವು ಸಾಧಿಸಿದೆ.
ಇತ್ತೀಚಿನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಯ ಭಾರಿ ಗೆಲುವು ರಾಹುಲ್ ಗಾಂಧಿಯವರಿಗೆ ಒಂದು ಪಾಠ ಎಂದು ಅಮಿತ್ ಶಾ ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.